ಹಂಪೆ

ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಊರು. ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪ' ಎಂದಿತ್ತು, ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ.